...

10 views

ಕೂಡಲಸಂಗಮದೇವ
ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯಾ?
ತನಗಾದ ಆಗೇನು? ಅವರಿಗಾದ ಚೇಗೇನು?
ತನುವಿನ ಕೋಪ ತನ್ನ ಹಿರಿಯತನದ ಕೇಡು.
ಮನದ ಕೋಪ ತನ್ನ ಅರಿವಿನ ಕೇಡು.
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯಸುಡದು, ಕೂಡಲಸಂಗಮದೇವಾ.....