ನೀರಾ ಆರ್ಯ..
ನಿರಾ ಆರ್ಯ ಆಜಾದ್ ಹಿಂದ್ ಸೈನ್ಯದ ಸದಸ್ಯೆ ..
ನಾನು ಕಲ್ಕತ್ತಾ ಜೈಲಿನಿಂದ ಅಂಡಮಾನ್ ತಲುಪಿದಾಗ ನಮ್ಮನ್ನು ಉಳಿದ ರಾಜಕೀಯ ಕೈದಿಗಳೊಂದಿಗೆ ಕತ್ತಲ ಕೋಣೆಯೊಳಗೆ ತಳ್ಳಲಾಯಿತು.
ಅಲ್ಲಿ ಚಾಪೆ ಕಂಬಳಿಗಳಂತಹ ಯಾವುದೇ ವಸ್ತುಗಳು ಕಾಣುತ್ತಿರಲಿಲ್ಲ.
ಇಲ್ಲಿ ನೀರಿನ ನಡುವೆ ಅಜ್ಞಾತ ದ್ವೀಪದಲ್ಲಿ ಕೊಳೆಯುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಹೇಗೆ ದೊರಕೀತು..? ಎಂಬ ಚಿಂತೆ ಕಂಬಳಿ ಚಾಪೆಯ ಚಿಂತೆಯನ್ನು ದೂರ ಮಾಡಿತ್ತು.. ಹೇಗೂ ಆಯಾಸದಿಂದ ಕಲ್ಲು ಚಪ್ಪಡಿಯ ಮೇಲೆ ಒರಗಿದಂತೆಯೇ ನಿದ್ದೆ ಬಂದಿತ್ತು.
ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಒಬ್ಬ ಗಾರ್ಡ್ ಕಂಬಳಿ ತೆಗೆದುಕೊಂಡು ಬಂದು ಏನೊಂದೂ ಮಾತಾಡದೆ ಮಲಗಿದ್ದವರ ಮೇಲೆಸೆದು ಹೋದ.
ಸೂರ್ಯೋದಯದ ನಂತರ ತಿನ್ನಲು ನನಗೆ ಕಿಚಡಿ ದೊರಕಿತು. ಸ್ವಲ್ಪ ಸಮಯದ ನಂತರ ಕಮ್ಮಾರ ಬಂದಿದ್ದ. ಕೈಗಳಿಗೆ ತೊಡಿಸಿದ ಸಂಕೋಲೆಯನ್ನು ತುಂಡರಿಸುವಾಗ ಕೈಯ ಚರ್ಮವೇ ಕಿತ್ತುಬಂದಿತ್ತು. ಕಾಲಿನ ಬೇಡಿ ತುಂಡರಿಸುವಾಗಂತೂ ಸುತ್ತಿಗೆ ಏಟು ಕಾಲ ಗಂಟಿಗೆ ಬಡಿದಿತ್ತು. ಒಮ್ಮೆಯಂತೂ ನೋವಿನಿಂದ ತಡೆಯಲಾರದೆ ಹೇಳಿದೆ "ಕಾಲಿನ ಮೇಲೆಯೇ ಸುತ್ತಿಗೆ ಬಡಿಯುತ್ತಿದ್ದೀಯಲ್ಲಾ .. ನೀನೇನು ಕುರುಡನೇ..?
ಕಾಲೇನು..? ನಿನ್ನ ಎದೆಗೂ ಬಡಿಯಬಲ್ಲೆ." ಎಂದು ದರ್ಪದಿಂದ ಹೇಳಿದನವ. ನನಗೆ ಕೋಪ ತಡೆಯಲಾಗಲಿಲ್ಲ. ತಲೆಯೆತ್ತಿ ಅವನ ಮುಖಕ್ಕೆ ಉಗುಳಿದೆ..! ಮಹಿಳೆಯರಿಗೆ ಗೌರವ ಕೊಡಲು ಕಲಿತುಕೋ...