ಚಂದ್ರಶೇಖರ್ ಆಜಾದ್..
ಚಂದ್ರಶೇಖರ ಆಜಾದ್....
ವಾರಣಾಸಿಯ ಬೀದಿಯಲ್ಲಿ ಸ್ವಾತಂತ್ರ ಹೋರಾಟಗಾರರ ಜಾಥಾ ನಡೆದಿತ್ತು. ಹದಿನೈದನೇ ವಯಸ್ಸಿಗಾಗಲೇ ತಾಯ್ನಾಡಿನ ಹಂಬಲ ಹತ್ತಿಸಿಕೊಂಡಿದ್ದ ಹುಡುಗನೊಬ್ಬ ಚಳುವಳಿಗಾರರ ಆಗಮನವನ್ನು ದೂರದಿಂದಲೇ ನೋಡುತ್ತ, ಕಾತರನಾಗಿ ಕಾಯುತ್ತಿದ್ದ. ಆ ಗುಂಪು ಹತ್ತಿರ ಬರುತ್ತಿದ್ದಂತೆ ತಾನೂ ಅವರಲ್ಲೊಂದಾಗಿ ನಡೆದ. “ಬೋಲೋ ಭಾರತ್ ಮಾತಾ ಕೀ?.. ಜೈ!" “ವಂದೇ... ಮಾತರಂ!"
ಹದಿನೈದಿಪ್ಪತ್ತು ಹೆಜ್ಜೆ ಸರಿದಿರಬೇಕು? ಪೋಲಿಸರ ದಂಡು ಜೇನ್ನೊಣಗಳ ಹಾಗೆ ಎಗರಿತು. ಘೋಷಣೆ ಕೂಗುತ್ತ ತನ್ನ ಪಾಡಿಗೆ ಸಾಗುತ್ತಿದ್ದ ಚಳುವಳಿಗಾರರನ್ನು ಮನಬಂದಂತೆ ಥಳಿಸಲಾಯ್ತು. ಎಂಭತ್ತರ ಆಸುಪಾಸಿನ ವೃದ್ಧರೊಬ್ಬರ ಎದೆ ಮೇಲೆ ಆಂಗ್ಲರ ಗುಲಾಮನೊಬ್ಬ ಲಾಠಿ ಬೀಸಿದ. ಆ ಹಿರಿಯ ಜೀವ ನೋವಿನಿಂದ ಚೀರುತ್ತ ಕೆಳಗುರುಳಿತು. ಪೆಟ್ಟು ತಿನ್ನುತ್ತಿದ್ದ ಹಿರಿಯರನ್ನು ನೋಡುತ್ತ ಸಂಕಟಪಡುತ್ತಿದ್ದ ಪೋರನಿಗೆ ಇನ್ನು ತಡಿಯಲಾಗಲಿಲ್ಲ. ಅಲ್ಲೇ ಕಾಲಬುಡದಲ್ಲಿ ಬಿದ್ದಿದ್ದ ಕಲ್ಲನ್ನೆತ್ತಿ ಒಗೆದ?
ವಾಹ್! ಎಂಥ ಗುರಿ! ಕಲ್ಲು ನೇರವಾಗಿ ಕ್ರೂರ ಗುಲಾಮನ ಹಣೆಯೊಡೆಯಿತು. ಅಷ್ಟೇ. ಮರು ಘಳಿಗೆಯಲ್ಲಿ ಬಾಲಕ ಜೈಲುಪಾಲಾಗಿದ್ದ. ಎಂದಿನಂತೆ ಆಂಗ್ಲರ ಕಟಕಟೆಯಲ್ಲಿ ವಿಚಾರಣೆಯ ನಾಟಕ. ಅಲ್ಲೊಂದು ಸ್ವಾರಸ್ಯಕರ ಸಂಭಾಷಣೆ:
ನ್ಯಾಯಾಧೀಶ: ನಿನ್ನ ಹೆಸರೇನು?
ಹುಡುಗ: ಆಜಾದ್!
ನ್ಯಾಯಾಧೀಶ: ತಂದೆಯ ಹೆಸರು?
ಹುಡುಗ: ಸ್ವಾತಂತ್ರ
ನ್ಯಾಯಾಧೀಶ: ಮನೆ ಎಲ್ಲಿದೆ?
ಹುಡುಗ: ಸೆರೆಮನೆಯೇ ನನಗೆ ಮನೆ!
ಎರಡೂ ಕೈಸೇರಿಸಿ ಹಾಕಿದರೂ ಕೋಳ ತುಂಬದ ಪುಟ್ಟ ಹುಡುಗನ ಕೆಚ್ಚೆದೆ ಆ ಬಿಳಿಯನಿಗೆ ಮತ್ಸರ ಮೂಡಿಸಿರಬೇಕು. ಹದಿನೈದು ಛಡಿ ಏಟುಗಳ ಶಿಕ್ಷೆ ವಿಧಿಸಿಬಿಟ್ಟ. ಆದರೇನು? ‘ವಂದೇ ಮಾತರಂ’ ಎನ್ನುವ ಮತ್ತೇರಿಸುವ, ಮೈಮರೆಸುವ ಘೋಷ ವಾಕ್ಯದ ಎದುರು ಯಾವ ಪೆಟ್ಟು ತಾನೆ ನೋವುಂಟು ಮಾಡಬಹುದಾಗಿತ್ತು ಆ ಎಳೆಯ ದೇಶಭಕ್ತನಿಗೆ? ಒಂದು ಹೊಡೆತಕ್ಕೆ ಭಯಂಕರ ಅಪರಾಧಿಗಳೂ ಅಳುವ ಸ್ಥಿತಿಗೆ ಬರುತ್ತಿದ್ದರು, ಇಂತಹ ಬೆತ್ತದ ಕಟ್ಟಿಗೆಯ ೧೫ ಏಟುಗಳನ್ನು ಆಝಾದನು ‘ವಂದೇ ಮಾತರಮ್| ಭಾರತ ಮಾತಾಕೀ ಜೈ|’ ಎಂದು ಹೇಳುತ್ತಾ ಸಹಿಸಿಕೊಂಡನು. ಆಗ ಅವನ ಬೆನ್ನು ರಕ್ತಮಯವಾಗಿದ್ದರೂ ಅವನು ತುಟಿಪಿಟಿಕ್ಕೆನ್ನಲಿಲ್ಲ. ಈ ಹೊಡೆತದಿಂದಾದ ಗಾಯಗಳಿಗೆ ಉಪಾಚಾರ ಮಾಡಲು ಆಂಗ್ಲ ಅಧಿಕಾರಿಯು ಅವನಿಗೆ ಮೂರಾಣೆ ಕೊಟ್ಟನು, ಆಗ ಅವನು ಅವುಗಳನ್ನು ಅಧಿಕಾರಿಯ ಮುಖಕ್ಕೆ ಎಸೆದನು ಮತ್ತು ತಲೆಯೆತ್ತಿ...